ಸಿಎಂಎ ಫೌಂಡೇಶನ್ ಫಲಿತಾಂಶ: ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ
ಕಾರ್ಕಳ: 'ಕಾಸ್ಟ್ ಅಂಡ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ (ಸಿಎಂಎ) ಫೌಂಡೇಶನ್' ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 18 ವಿದ್ಯಾರ್ಥಿಗಳ ಪೈಕಿ 14 ಮಂದಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದು, ಸಂಸ್ಥೆ ಶೇ. 77.77ರಷ್ಟು ತೇರ್ಗಡೆ ಪ್ರಮಾಣ ದಾಖಲಿಸಿದೆ.